Ambigara Chowdayya Vachana Collection ನಿಜಶರಣ ಅಂಬಿಗರ ಚೌಡಯ್ಯನವರ ಸಂಪೂರ್ಣ ವಚನಗಳು
ನಿಜಶರಣ ಅಂಬಿಗರ ಚೌಡಯ್ಯ ೧೨ನೇ ಶತಮಾನದಲ್ಲಿ ಜೀವಿಸಿದ್ಧ ಶಿವಶರಣ ಹಾಗೂ ವಚನಕಾರರು. ಇವರ ಹುಟ್ಟಿದ್ದು ೧೧೬೦ ನೇ ಇಸವಿ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚೌಡದಾನಪುರವೆಂದು ಹೇಳಿದ್ದಾರೆ. ಅಂಬಿಗರ ಚೌಡಯ್ಯನ ಮೂಲ ಹೆಸರು ಚೌಡೇಶ. ಇವರ ತಾಯಿ ಹೆಸರು ಪಂಪಾದೇವಿ ಮತ್ತು ತಂದೆ ವಿರೂಪಾಕ್ಷ. ಉಳಿದೆಲ್ಲ ವಚನಕಾರರಿಗಿಂತ ಭಿನ್ನ ಹಾಗೂ ವಿಶಿಷ್ಟ ವ್ಯಕ್ತಿತ್ವ ಇವರದು. ವೃತ್ತಿಯಿಂದ ಅಂಬಿಗ, ಪ್ರವೃತ್ತಿಯಲ್ಲಿ ಅನುಭಾವಿ. ಇವರು ಗುತ್ತಲರ ಅರಸರ ಆಳ್ವಿಕೆ ಕಾಲದಲ್ಲಿ ಚೌಡದಾನಪುರದ ತುಂಗಭದ ನದಿ ತೀರದಲ್ಲಿ ತನ್ನ ದೋಣಿಯ ಮೂಲಕ ಜನರನ್ನು ಒಂದು ದಡದಿಂದ ಇನ್ನೊಂದು ದಡಕ್ಕೆ ಸಾಗಿಸುವ ಕಾಯಕದಲ್ಲಿ ನಿರತರಾಗಿದ್ದರು. ನೇರ ನಿರ್ಭೀತ ನುಡಿಗಳಿಂದ ವಚನಗಳನ್ನು ಬರೆದಿರುವುದು ಗೋಚರಿಸುತ್ತದೆ. ಅಂಬಿಗರ ಚೌಡಯ್ಯ ೧೨ನೇ ಶತಮಾನದ ಬಸವಣ್ಣನವರ ಅನುಯಾಯಿ ಶರಣ. ಸಾವಿರಾರು ವರ್ಷಗಳಿಂದ ಧರ್ಮ-ದೇವರುಗಳ ಬಗೆಗೆ ಜನ ಸಮೂಹದಲ್ಲಿದ್ದ ಮೂಢನಂಬಿಕೆಗಳನ್ನೆಲ್ಲ ಗುರು ಬಸವಣ್ಣನವರೊಂದಿಗೆ ಅಂಬಿಗರ ಚೌಡಯ್ಯ ಹೊಡೆದೋಡಿಸುತ್ತಲೇ ವಿಚಾರ ಪರ ವಾದ, ವಾಸ್ತವವಾದ ಅಂಶಗಳನ್ನು ಜನಮನದಲ್ಲಿ ಮೂಡಿಸಿದರು. ಮಾತು ಕಟುವಾದರೂ ದಿಟವನ್ನೆ ನುಡಿದ ದಿಟ್ಟನೀತ ನುಡಿದಂತೆ ನಡೆದವನು, ನಡೆದಂತೆ ನುಡಿದವನು ಅಂಬಿಗರ ಚೌಡಯ್ಯ. ನಿಜಾರ್ಥದಲ್ಲಿ ಒಬ್ಬ ಬಂಡುಕೋರ, ಕ್ರಾಂತಿಕಾರಿ ಶರಣ, ನಿಷ್ಟೂರ ಮನುಷ್ಯ. ಎಲ್ಲಾ ಶರಣರಂತೆ ಈತ ಕಾಯಕಯೋಗಿ. ದೋಣಿ ನಡೆಸುವುದು ಅವನ ಕಾಯಕ. ಸುಮಾರು ಈತನ ೨೭೮ ವಚನಗಳು ದೊರಕಿವೆ. ವಚನಾಂಕಿತವನ್ನು ತನ್ನ ಹೆಸರಿನಲ್ಲೆ ಬಳಸಿದ್ದಾನೆ. ಅಂಬಿಗರ ಚೌಡಯ್ಯ ಪರಿಣಾಮ ಬೀರುವಂತೆ ರಚಿಸಿರುವ ಅವನ ವಚನಗಳಲ್ಲಿ ಆಳವಾದ ಅನುಭವ, ಸಾಮಾಜಿಕ ಪ್ರಜ್ಞೆ ಎದ್ದು ಕಾಣುತ್ತದೆ. ಅಂಬಿಗರ ಚೌಡಯ್ಯ ಏಕದೇವೋಪಾಸಕನು, ಇಷ್ಟಲಿಂಗ ಆರಾಧಕನು, ದೇವಾಲಯ ಗುಡಿಗುಂಡಾರ ವಿರೋಧಿಯಾತ, ಇಷ್ಟಲಿಂಗಪೂಜೆ ಪ್ರತಿಯೊಬ್ಬರು ಮಾಡಬೇಕು. ಇಲ್ಲಿ ಯಾವ ಭೇಧಭಾವ ಇಲ್ಲ. ದೇಹವನ್ನೇ ದೇವಾಲಯವಾಗಿಸಿಕೊಳ್ಳಲು ಅದು ಸಾಧನ ಎಂದನು.
For any problem / concern please contact us through https://vishaya.in website and vishaya.in@gmail.com.
Aktualisiert am
17.09.2024
Bücher & Nachschlagewerke