ਅਕਤੂ 2018 · Kannada works of D V Gundappaਕਿਤਾਬ 36 · Sriranga Digital Software Technologies Pvt. Ltd.
ਈ-ਕਿਤਾਬ
30
ਪੰਨੇ
ਮੁਫ਼ਤ ਨਮੂਨਾ
ਇਸ ਈ-ਕਿਤਾਬ ਬਾਰੇ
“ನಿವೇದನ” ಪುಸ್ತಕವು ಮೊದಲ ಸಾರಿ ಪ್ರಕಟವಾದದ್ದು ೧೯೨೪ನೆಯ ಇಸ್ವಿ ಏಪ್ರಿಲ್ ತಿಂಗಳಲ್ಲಿ, ಬೆಂಗಳೂರು ಸೆಂಟ್ರಲ್ ಕಾಲೇಜಿನ ಕರ್ಣಾಟಕ ಸಂಘದ ಆಶ್ರಯದಲ್ಲಿ. “ತನ್ನ ದೇಶದಲ್ಲಿ ಪ್ರಕೃತಿ ನಿರ್ಮಿತಗಳಾಗಿಯೂ ಮನುಷ್ಯ ನಿರ್ಮಿತಗಳಾಗಿಯೂ ಖ್ಯಾತಿಗೊಂಡಿರುವ ದೃಶ್ಯ ವಿಶೇಷಗಳನ್ನು ಲೇಖಕನು ಮೊಟ್ಟ ಮೊದಲು ನೋಡಿದಾಗ ತನಗಾದ ಅನುಭವವು ಮರಳಿ ಆಗಾಗ ತನ್ನ ನೆನಪಿಗೆ ದೊರೆಯಲಾಗುವಂತೆ ಅದನ್ನು ಮಾತುಗಳಲ್ಲಿ ಸಂಗ್ರಹಿಸಿಟ್ಟುಕೊಳ್ಳಬೇಕೆಂದು ಮಾಡಿದ ಪ್ರಯತ್ನದ ಫಲವೇ ಈ ಪುಸ್ತಕದ ಪದ್ಯಗಳು”. … “ಬೇಲೂರಿನ ವಿಗ್ರಹಗಳು ಕೀಟ್ಸ್ (Keats) ಎಂಬ ಇಂಗ್ಲಿಷ್ ಕವಿಯ Ode on a Grecian Urn ಎಂಬ ಕಾವ್ಯದಲ್ಲಿಯ ಸೌಂದರ್ಯ ಪ್ರಶಂಸೆಯನ್ನು ಜ್ಞಾಪಕಕ್ಕೆ ತಂದವು. ಇಲ್ಲಿಯ ಒಂದೆರಡು ಪಂಕ್ತಿಗಳು ಆ ಮಹಾಕವಿಯ ಪ್ರಸಾದವಾಗಿವೆ”. ಈ ಪುಸ್ತಕಕ್ಕೆ ಇಂದಿನ ಪುನರ್ಮುದ್ರಣಯೋಗ ಬಂದಿರುವುದು ಬಹುಮಟ್ಟಿಗೆ ಮೈಸೂರು ವಿಶ್ವವಿದ್ಯಾಲಯದ ಕೃಪೆಯಿಂದ. ಆ ವಿದ್ಯಾಪೀಠದ ಅಧಿಕಾರಿಗಳು ಇದನ್ನು ೧೯೫೮ರ ಇಂಟರ್‍ಈಡಿಯೆಟ್ ಪರೀಕ್ಷೆಗೆ ಪಠ್ಯಗ್ರಂಥವನ್ನಾಗಿರಿಸಿದ್ದಾರೆ. ಈ ಉಪಕಾರಕ್ಕಾಗಿ ಅವರಿಗೆ ಲೇಖಕನ ಹೃದಯದಿಂದ ವಂದನೆ.