A.K. Ramanujan Avara Aayda Barahagalu: ಎ.ಕೆ. ರಾಮಾನುಜನ್ ಅವರ ಆಯ್ದ ಬರಹಗಳು

Modala Odu - ಮೊದಲ ಓದು null. књига · Akshara Prakashana
5,0
1 recenzija
E-knjiga
175
Stranica

O ovoj e-knjizi

ಅಕ್ಷರ ಪ್ರಕಾಶನಕ್ಕೆ ೫೦ ತುಂಬಿದ ೨೦೦೬ನೆಯ ವರ್ಷ, ದಿ| ಕೆ.ವಿ. ಸುಬ್ಬಣ್ಣನವರ ನೆನಪಿಗೆ, ಈ ಹೊಸ ಪುಸ್ತಕಮಾಲೆಯ ಮೊದಲ ಕಂತಿನ ೨೫ ಪುಸ್ತಕಗಳು ಬಿಡುಗಡೆಗೊಂಡವು; ೨೦೦೭ರಲ್ಲಿ ಎರಡನೆಯ ಕಂತಿನ ಇನ್ನೂ ೧೦ ಪುಸ್ತಕಗಳು ಮತ್ತು ೨೦೦೯ರಲ್ಲಿ ಇನ್ನೂ ೧೫ - ಹೀಗೆ ಒಟ್ಟು ೫೦ ಪುಸ್ತಕಗಳು ಈವರೆಗೆ ಈ ಮಾಲಿಕೆಯಲ್ಲಿ ಪ್ರಕಟಗೊಂಡಿವೆ.

ಕನ್ನಡ ಸಾಹಿತ್ಯವನ್ನು ಪ್ರವೇಶಿಸಬಯಸುವ ಹೊಸ ಓದುಗರಿಗೆ ಕನ್ನಡದ ಪ್ರಮುಖ ಲೇಖಕರ ಆಯ್ದ ಬರಹಗಳ ಕಿರುವಾಚಿಕೆಗಳು ಲಭ್ಯವಾಗಬೇಕು - ಎಂಬ ಉದ್ದೇಶವಿಟ್ಟುಕೊಂಡು ಅಕ್ಷರ ಪ್ರಕಾಶನವು ಈ ಪುಸ್ತಕಮಾಲಿಕೆಯನ್ನು ಆರಂಭಿಸಿದೆ. ತಲಾ ೧೦೮ ಪುಟಗಳ ಈ ಪುಸ್ತಕಗಳಲ್ಲಿ - ಆಧುನಿಕಪೂರ್ವ ಕನ್ನಡದ ಮಹತ್ಕೃತಿಗಳೂ (ಟಿಪ್ಪಣಿಗಳೊಂದಿಗೆ) ಹಾಗೂ ಹೊಸಗನ್ನಡದ ಪ್ರಮುಖ ಲೇಖಕರ ಆಯ್ದ ಕಥೆ-ಕವನ-ಪ್ರಬಂಧಗಳೂ ಮತ್ತು ಕೆಲವು ಕನ್ನಡೇತರ ಲೇಖಕರ ಆಯ್ದ ಬರಹಗಳ ಸಂಗ್ರಹಗಳೂ ಸೇರಿವೆ. ಆಯಾ ಲೇಖಕರನ್ನು ಮೊದಲ ಬಾರಿಗೆ ಪರಿಚಯಿಸಿಕೊಳ್ಳುವವರಿಗೆ ಉಪಯುಕ್ತವಾಗುವಂತೆ ಈ ಪುಸ್ತಕಗಳ ವಸ್ತು-ವಿನ್ಯಾಸಗಳನ್ನು ರೂಪಿಸಲಾಗಿದೆ. ಮಾರುಕಟ್ಟೆಗೆ ಬಿಡುಗಡೆಯಾಗುವ ಜತೆಗೆ, ಈ ಮಾಲಿಕೆಯ ಪುಸ್ತಕಗಳನ್ನು ನೀನಾಸಮ್ ಪ್ರತಿಷ್ಠಾನವು ನಡೆಸುತ್ತಿರುವ ಸಾಹಿತ್ಯ ಅಧ್ಯಯನ ಶಿಬಿರಗಳಲ್ಲಿ ಪಠ್ಯಗಳಾಗಿಯೂ ಬಳಸಲಾಗುತ್ತದೆ.

A Kannada book by Akshara Prakashana / ಅಕ್ಷರ ಪ್ರಕಾಶನ

Ocene i recenzije

5,0
1 recenzija

O autoru

ಅತ್ತಿಪ್ಪಟ್ಟ್ ಕೃಷ್ಣಸ್ವಾಮಿ ರಾಮಾನುಜನ್ ಇವರು 16 ಮಾರ್ಚ್ 1929ರಂದು ಮೈಸೂರಿನಲ್ಲಿ ಜನಿಸಿದರು. ಮೈಸೂರು, ಪೂನಾ, ಅಮೇರಿಕಗಳಲ್ಲಿ ವಿದ್ಯಾಭ್ಯಾಸ, ಎಂ.ಎ., ಪಿ.ಎಚ್.ಡಿ. ಪದವಿ ಪಡೆದರು. ಬೆಳಗಾವಿಯ ಲಿಂಗರಾಜ ಕಾಲೇಜಿನಲ್ಲಿ ಅಧ್ಯಾಪಕರಾಗಿ ವೃತ್ತಿ ಆರಂಭಿಸಿದ ಇವರು ಮುಂದೆ, ಷಿಕಾಗೋ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾಗಿಯೂ ಕೆಲಸ ಮಾಡಿದರು. ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಹಲವಾರು ಕೃತಿಗಳನ್ನು ರಚಿಸಿರುವ ಇವರು ತಮಿಳಿನಿಂದ ನಮ್ಮಾಳ್ವಾರ್ ಮತ್ತು ಕನ್ನಡದಿಂದ ಅಲ್ಲಮ, ಬಸವಣ್ಣ, ಅಕ್ಕ, ದಾಸಿಮಯ್ಯರ ವಚನಗಳನ್ನು, ಅಡಿಗರ ಕಾವ್ಯ ಮತ್ತು ಅನಂತಮೂರ್ತಿಯವರ ’ಸಂಸ್ಕಾರ’ ಕಾದಂಬರಿಯನ್ನು ಇಂಗ್ಲಿಷಿಗೆ ಅನುವಾದಿಸಿದ್ದಾರೆ. ಕನ್ನಡದಲ್ಲಿ ತಮ್ಮದೇ ವಿಶಿಷ್ಟ ಛಾಪಿನ ಕಥೆ, ಕಾದಂಬರಿ, ಕವಿತೆಗಳನ್ನು ಬರೆದಿದ್ದಾರೆ. ’ಹೊಕ್ಕುಳಲ್ಲಿ ಹೂವಿಲ್ಲ’, ’ಕುಂಟೋಬಿಲ್ಲೆ’, ’ಮತ್ತೊಬ್ಬನ ಆತ್ಮಚರಿತ್ರೆ’, ’ಸ್ಪೀಕಿಂಗ್ ಆಫ್ ಶಿವ’ ಮುಂತಾದವು ಇವರ ಪ್ರಮುಖ ಕೃತಿಗಳು. ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಪದ್ಮಶ್ರೀ ಮುಂತಾದ ಪುರಸ್ಕಾರಗಳು ಇವರಿಗೆ ಸಂದಿವೆ. ಇವರು 13, ಜುಲೈ 1993ರಂದು ಅಮೆರಿಕದಲ್ಲಿ ನಿಧನರಾದರು.

Ocenite ovu e-knjigu

Javite nam svoje mišljenje.

Informacije o čitanju

Pametni telefoni i tableti
Instalirajte aplikaciju Google Play knjige za Android i iPad/iPhone. Automatski se sinhronizuje sa nalogom i omogućava vam da čitate onlajn i oflajn gde god da se nalazite.
Laptopovi i računari
Možete da slušate audio-knjige kupljene na Google Play-u pomoću veb-pregledača na računaru.
E-čitači i drugi uređaji
Da biste čitali na uređajima koje koriste e-mastilo, kao što su Kobo e-čitači, treba da preuzmete fajl i prenesete ga na uređaj. Pratite detaljna uputstva iz centra za pomoć da biste preneli fajlove u podržane e-čitače.