Devanoora Mahadeva Avara Aayda Kathegalu: ದೇವನೂರ ಮಹಾದೇವ ಅವರ ಆಯ್ದ ಕಥೆಗಳು

Modala Odu - ಮೊದಲ ಓದು Գիրք null · Akshara Prakashana
4,8
5 կարծիք
Էլ. գիրք
188
Էջեր

Այս էլ․ գրքի մասին

ಅಕ್ಷರ ಪ್ರಕಾಶನಕ್ಕೆ ೫೦ ತುಂಬಿದ ೨೦೦೬ನೆಯ ವರ್ಷ, ದಿ| ಕೆ.ವಿ. ಸುಬ್ಬಣ್ಣನವರ ನೆನಪಿಗೆ, ಈ ಹೊಸ ಪುಸ್ತಕಮಾಲೆಯ ಮೊದಲ ಕಂತಿನ ೨೫ ಪುಸ್ತಕಗಳು ಬಿಡುಗಡೆಗೊಂಡವು; ೨೦೦೭ರಲ್ಲಿ ಎರಡನೆಯ ಕಂತಿನ ಇನ್ನೂ ೧೦ ಪುಸ್ತಕಗಳು ಮತ್ತು ೨೦೦೯ರಲ್ಲಿ ಇನ್ನೂ ೧೫ - ಹೀಗೆ ಒಟ್ಟು ೫೦ ಪುಸ್ತಕಗಳು ಈವರೆಗೆ ಈ ಮಾಲಿಕೆಯಲ್ಲಿ ಪ್ರಕಟಗೊಂಡಿವೆ.

ಕನ್ನಡ ಸಾಹಿತ್ಯವನ್ನು ಪ್ರವೇಶಿಸಬಯಸುವ ಹೊಸ ಓದುಗರಿಗೆ ಕನ್ನಡದ ಪ್ರಮುಖ ಲೇಖಕರ ಆಯ್ದ ಬರಹಗಳ ಕಿರುವಾಚಿಕೆಗಳು ಲಭ್ಯವಾಗಬೇಕು - ಎಂಬ ಉದ್ದೇಶವಿಟ್ಟುಕೊಂಡು ಅಕ್ಷರ ಪ್ರಕಾಶನವು ಈ ಪುಸ್ತಕಮಾಲಿಕೆಯನ್ನು ಆರಂಭಿಸಿದೆ. ತಲಾ ೧೦೮ ಪುಟಗಳ ಈ ಪುಸ್ತಕಗಳಲ್ಲಿ - ಆಧುನಿಕಪೂರ್ವ ಕನ್ನಡದ ಮಹತ್ಕೃತಿಗಳೂ (ಟಿಪ್ಪಣಿಗಳೊಂದಿಗೆ) ಹಾಗೂ ಹೊಸಗನ್ನಡದ ಪ್ರಮುಖ ಲೇಖಕರ ಆಯ್ದ ಕಥೆ-ಕವನ-ಪ್ರಬಂಧಗಳೂ ಮತ್ತು ಕೆಲವು ಕನ್ನಡೇತರ ಲೇಖಕರ ಆಯ್ದ ಬರಹಗಳ ಸಂಗ್ರಹಗಳೂ ಸೇರಿವೆ. ಆಯಾ ಲೇಖಕರನ್ನು ಮೊದಲ ಬಾರಿಗೆ ಪರಿಚಯಿಸಿಕೊಳ್ಳುವವರಿಗೆ ಉಪಯುಕ್ತವಾಗುವಂತೆ ಈ ಪುಸ್ತಕಗಳ ವಸ್ತು-ವಿನ್ಯಾಸಗಳನ್ನು ರೂಪಿಸಲಾಗಿದೆ. ಮಾರುಕಟ್ಟೆಗೆ ಬಿಡುಗಡೆಯಾಗುವ ಜತೆಗೆ, ಈ ಮಾಲಿಕೆಯ ಪುಸ್ತಕಗಳನ್ನು ನೀನಾಸಮ್ ಪ್ರತಿಷ್ಠಾನವು ನಡೆಸುತ್ತಿರುವ ಸಾಹಿತ್ಯ ಅಧ್ಯಯನ ಶಿಬಿರಗಳಲ್ಲಿ ಪಠ್ಯಗಳಾಗಿಯೂ ಬಳಸಲಾಗುತ್ತದೆ.

A Kannada book by Akshara Prakashana / ಅಕ್ಷರ ಪ್ರಕಾಶನ

Գնահատականներ և կարծիքներ

4,8
5 կարծիք

Հեղինակի մասին

ದೇವನೂರ ಮಹಾದೇವ ಅವರು ೧೦, ಜೂನ್ ೧೯೪೮ರಂದು ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ದೇವನೂರು ಗ್ರಾಮದಲ್ಲಿ ಜನಿಸಿದರು. ಅವರು ದೇವನೂರು, ನಂಜನಗೂಡು, ಮೈಸೂರುಗಳಲ್ಲಿ ತಮ್ಮ ಪ್ರಾರಂಭಿಕ ವಿದ್ಯಾಭ್ಯಾಸ ಮಾಡಿ, ೧೯೭೩ರಲ್ಲಿ ಮೈಸೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ಎಂ.ಎ. ಪದವಿಯನ್ನು ಪಡೆದರು. ೧೯೭೫ರಿಂದ ೧೯೮೯ರವರೆಗೆ ಮೈಸೂರಿನ ಭಾರತೀಯ ಭಾಷಾ ಸಂಸ್ಥಾನದಲ್ಲಿ ಅಧ್ಯಾಪಕರಾಗಿ ಕೆಲಸ ಮಾಡಿದ ಇವರು ಅನಂತರದ ವರ್ಷಗಳಲ್ಲಿ ಪೂರ್ಣಾವಧಿ ಕೃಷಿಕರಾದರು. ಕರ್ನಾಟಕದ ದಲಿತ ಚಳುವಳಿಯ ಪ್ರಮುಖ ನೇತಾರರಲ್ಲಿ ಒಬ್ಬರಾದ ಅವರು ಪ್ರಸ್ತುತ, ರೈತ ಮತ್ತು ದಲಿತ ಚಳುವಳಿಗಳ ಸಮನ್ವಯದ ಪ್ರಯತ್ನಕ್ಕೆ ಕೈಹಾಕಿರುವ ಕರ್ನಾಟಕ ಸರ್ವೋದಯ ಪಕ್ಷದ ನೇತೃತ್ವ ವಹಿಸಿಕೊಂಡಿದ್ದಾರೆ. `ದ್ಯಾವನೂರು', `ಒಡಲಾಳ', `ಕುಸುಮಬಾಲೆ', `ಗಾಂಧಿ ಮತ್ತು ಮಾವೋ' ಇವರ ಪ್ರಮುಖ ಕೃತಿಗಳು. ಇವರಿಗೆ ಕಲ್ಕತ್ತಾದ ಭಾರತೀಯ ಪರಿಷತ್ ಗೌರವ, ಕರ್ನಾಟಕ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು ದೊರಕಿವೆ.

Գնահատեք էլ․ գիրքը

Կարծիք հայտնեք։

Տեղեկություններ

Սմարթֆոններ և պլանշետներ
Տեղադրեք Google Play Գրքեր հավելվածը Android-ի և iPad/iPhone-ի համար։ Այն ավտոմատ համաժամացվում է ձեր հաշվի հետ և թույլ է տալիս կարդալ առցանց և անցանց ռեժիմներում:
Նոթբուքներ և համակարգիչներ
Դուք կարող եք լսել Google Play-ից գնված աուդիոգրքերը համակարգչի դիտարկիչով:
Գրքեր կարդալու սարքեր
Գրքերը E-ink տեխնոլոգիան աջակցող սարքերով (օր․՝ Kobo էլեկտրոնային ընթերցիչով) կարդալու համար ներբեռնեք ֆայլը և այն փոխանցեք ձեր սարք։ Մանրամասն ցուցումները կարող եք գտնել Օգնության կենտրոնում։