ರವಿಶಂಕರ ಎ.ಕೆ. ಅವರು ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಅಳಿಲುಘಟ್ಟ ಗ್ರಾಮದವರು. ಅರವಿಂದ ಆಶ್ರಮದಿಂದ ಪ್ರಭಾವಿತರು. ಕನ್ನಡ ಸಾಹಿತ್ಯದಲ್ಲಿ ಶಿಕ್ಷಣ ಪದವಿ, ಸ್ನಾತಕೋತ್ತರ ಪದವಿ ಹಾಗೂ ‘ಬೇಂದ್ರೆ ಸಾಹಿತ್ಯ : ವಿಮರ್ಶೆಯ ಸ್ವರೂಪ ಮತ್ತು ತಾತ್ವಿಕತೆ’ ವಿಷಯದ ಮೇಲೆ ಪಿಎಚ್.ಡಿ ಪದವಿ ಪಡೆದಿದ್ದಾರೆ. ಜೈನ್ ವಿಶ್ವವಿದ್ಯಾಲಯ, ಆಳ್ವಾಸ್ ಶಿಕ್ಷಣ ಸಂಸ್ಥೆ, ಕೃಪಾನಿಧಿ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ, ಸದ್ಯ ಬೆಂಗಳೂರಿನ ಕ್ರಿಸ್ತು ಜಯಂತಿ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ. ಅಂಕುರ-ಎಂಬುದು ಇವರ ಕಾವ್ಯನಾಮ.