H.S. Venkatesha Murthy Avara Aayda Kavithegalu: ಎಚ್.ಎಸ್. ವೆಂಕಟೇಶಮೂರ್ತಿ ಅವರ ಆಯ್ದ ಕವಿತೆಗಳು

Modala Odu - ಮೊದಲ ಓದು Kirja null · Akshara Prakashana
E-kirja
157
sivuja

Tietoa tästä e-kirjasta

ಅಕ್ಷರ ಪ್ರಕಾಶನಕ್ಕೆ ೫೦ ತುಂಬಿದ ೨೦೦೬ನೆಯ ವರ್ಷ, ದಿ| ಕೆ.ವಿ. ಸುಬ್ಬಣ್ಣನವರ ನೆನಪಿಗೆ, ಈ ಹೊಸ ಪುಸ್ತಕಮಾಲೆಯ ಮೊದಲ ಕಂತಿನ ೨೫ ಪುಸ್ತಕಗಳು ಬಿಡುಗಡೆಗೊಂಡವು; ೨೦೦೭ರಲ್ಲಿ ಎರಡನೆಯ ಕಂತಿನ ಇನ್ನೂ ೧೦ ಪುಸ್ತಕಗಳು ಮತ್ತು ೨೦೦೯ರಲ್ಲಿ ಇನ್ನೂ ೧೫ - ಹೀಗೆ ಒಟ್ಟು ೫೦ ಪುಸ್ತಕಗಳು ಈವರೆಗೆ ಈ ಮಾಲಿಕೆಯಲ್ಲಿ ಪ್ರಕಟಗೊಂಡಿವೆ.

ಕನ್ನಡ ಸಾಹಿತ್ಯವನ್ನು ಪ್ರವೇಶಿಸಬಯಸುವ ಹೊಸ ಓದುಗರಿಗೆ ಕನ್ನಡದ ಪ್ರಮುಖ ಲೇಖಕರ ಆಯ್ದ ಬರಹಗಳ ಕಿರುವಾಚಿಕೆಗಳು ಲಭ್ಯವಾಗಬೇಕು - ಎಂಬ ಉದ್ದೇಶವಿಟ್ಟುಕೊಂಡು ಅಕ್ಷರ ಪ್ರಕಾಶನವು ಈ ಪುಸ್ತಕಮಾಲಿಕೆಯನ್ನು ಆರಂಭಿಸಿದೆ. ತಲಾ ೧೦೮ ಪುಟಗಳ ಈ ಪುಸ್ತಕಗಳಲ್ಲಿ - ಆಧುನಿಕಪೂರ್ವ ಕನ್ನಡದ ಮಹತ್ಕೃತಿಗಳೂ (ಟಿಪ್ಪಣಿಗಳೊಂದಿಗೆ) ಹಾಗೂ ಹೊಸಗನ್ನಡದ ಪ್ರಮುಖ ಲೇಖಕರ ಆಯ್ದ ಕಥೆ-ಕವನ-ಪ್ರಬಂಧಗಳೂ ಮತ್ತು ಕೆಲವು ಕನ್ನಡೇತರ ಲೇಖಕರ ಆಯ್ದ ಬರಹಗಳ ಸಂಗ್ರಹಗಳೂ ಸೇರಿವೆ. ಆಯಾ ಲೇಖಕರನ್ನು ಮೊದಲ ಬಾರಿಗೆ ಪರಿಚಯಿಸಿಕೊಳ್ಳುವವರಿಗೆ ಉಪಯುಕ್ತವಾಗುವಂತೆ ಈ ಪುಸ್ತಕಗಳ ವಸ್ತು-ವಿನ್ಯಾಸಗಳನ್ನು ರೂಪಿಸಲಾಗಿದೆ. ಮಾರುಕಟ್ಟೆಗೆ ಬಿಡುಗಡೆಯಾಗುವ ಜತೆಗೆ, ಈ ಮಾಲಿಕೆಯ ಪುಸ್ತಕಗಳನ್ನು ನೀನಾಸಮ್ ಪ್ರತಿಷ್ಠಾನವು ನಡೆಸುತ್ತಿರುವ ಸಾಹಿತ್ಯ ಅಧ್ಯಯನ ಶಿಬಿರಗಳಲ್ಲಿ ಪಠ್ಯಗಳಾಗಿಯೂ ಬಳಸಲಾಗುತ್ತದೆ.

A Kannada book by Akshara Prakashana / ಅಕ್ಷರ ಪ್ರಕಾಶನ

Tietoja kirjoittajasta

1944ರಲ್ಲಿ ಚನ್ನಗಿರಿ ತಾಲ್ಲೂಕು ಹೋದಿಗೆರೆಯಲ್ಲಿ ಜನಿಸಿದ ವೆಂಕಟೇಶಮೂರ್ತಿಯವರು ಮೂವತ್ತು ವರ್ಷ ಗ್ರಾಮ್ಯಜೀವನ ನಡೆಸಿ ಬಳಿಕ ಬೆಂಗಳೂರಿನಲ್ಲಿ ಕನ್ನಡ ಅಧ್ಯಾಪಕರಾಗಿ ಕೆಲಸಮಾಡಿ, ನಿವೃತ್ತಿಯ ಅನಂತರ ಈಗ ಬೆಂಗಳೂರಿನಲ್ಲಿಯೇ ನೆಲೆಸಿದ್ದಾರೆ. ಸಮಕಾಲೀನ ಸಂದರ್ಭದ ಮುಖ್ಯ ಕವಿ ಮತ್ತು ಪ್ರಯೋಗಶೀಲ ನಾಟಕಕಾರ ಎಂದು ಗುರುತಿಸಲ್ಪಟ್ಟಿರುವ ಇವರು ಮಕ್ಕಳಿಗಾಗಿ ಕವಿತೆ, ನಾಟಕ, ಕಥೆಗಳನ್ನೂ ಬರೆದಿದ್ದಾರೆ. ಇವರು ಅನುವಾದಿಸಿದ ಕಾಳಿದಾಸನ ‘ಋತುಸಂಹಾರ‘ ಕಾವ್ಯಕೃತಿಯು ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಪುರಸ್ಕಾರವನ್ನು ಪಡೆದಿದೆ. ‘ಕ್ರಿಯಾಪರ್ವ‘, ‘ಎಷ್ಟೊಂದು ಮುಗಿಲು‘, ‘ನದೀತೀರದಲ್ಲಿ‘, ‘ಉತ್ತರಾಯಣ‘ ಮೊದಲಾದವು ಇವರ ಮುಖ್ಯ ಕಾವ್ಯಕೃತಿಗಳು; ‘ಅಗ್ನಿವರ್ಣ’, ‘ಚಿತ್ರಪಟ’, ‘ಉರಿಯ ಉಯ್ಯಾಲೆ‘, ‘ಮಂಥರೆ‘ ಮೊದಲಾದುವು ಇವರ ಮುಖ್ಯ ನಾಟಕಗಳು; ‘ಈ ಮುಖೇನ‘ ಇವರ ವೈಚಾರಿಕ ಪ್ರಬಂಧಗಳ ಸಂಪುಟ. ಕರ್ನಾಟಕ ಸಾಹಿತ್ಯ ಅಕಾಡೆಮಿ ಬಹುಮಾನ, ರಾಜ್ಯೋತ್ಸವ ಪ್ರಶಸ್ತಿ, ಆಕಾಶವಾಣಿ ರಾಷ್ಟ್ರೀಯ ಪ್ರಶಸ್ತಿ - ಇವು ಇವರು ಪಡೆದ ಕೆಲವು ಮುಖ್ಯ ಗೌರವಪುರಸ್ಕಾರಗಳು.

Arvioi tämä e-kirja

Kerro meille mielipiteesi.

Tietoa lukemisesta

Älypuhelimet ja tabletit
Asenna Google Play Kirjat ‑sovellus Androidille tai iPadille/iPhonelle. Se synkronoituu automaattisesti tilisi kanssa, jolloin voit lukea online- tai offline-tilassa missä tahansa oletkin.
Kannettavat ja pöytätietokoneet
Voit kuunnella Google Playsta ostettuja äänikirjoja tietokoneesi selaimella.
Lukulaitteet ja muut laitteet
Jos haluat lukea kirjoja sähköisellä lukulaitteella, esim. Kobo-lukulaitteella, sinun täytyy ladata tiedosto ja siirtää se laitteellesi. Siirrä tiedostoja tuettuihin lukulaitteisiin seuraamalla ohjekeskuksen ohjeita.